ವೆದರ್‌ ಮಿರರ್‌ | 02-11-2022 | ರಾಜ್ಯದ ವಿವಿದೆಡೆ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ

November 2, 2022
11:15 AM

03.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಹಾಗೂ ಚಿಕ್ಕಮಗಳೂರು ಶಿವಮೊಗ್ಗ ಗಡಿ ಭಾಗಗಳಲ್ಲಿ, ಉತ್ತರ ಕನ್ನಡದ ಕರಾವಳಿ ಹೊರತುಪಡಿಸಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಸೋಮವಾರಪೇಟೆ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬಳ್ಳಾರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬೆಳಗಾವಿ, ಗದಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಹಿಂಗಾರು ಮಾರುತಗಳು ಒತ್ತಡ ಕಡಿಮೆ ಇರುವುದರಿಂದ ದುರ್ಬಲವಾಗಿದೆ. ರಾಜ್ಯದಾದ್ಯಂತ ಭಾರಿ ಮಳೆಯ ಲಕ್ಷಣಗಳಿಲ್ಲದಿದ್ದರೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅದರಲ್ಲೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಇದ್ದರೆ ಒತ್ತರ ಒಳನಾಡು ಅಲ್ಲಲ್ಲಿ, ಕರಾವಳಿಯಲ್ಲಿ ಹಿಂಗಾರು ಪ್ರಭಾವ ತುಂಬಾ ಕಡಿಮೆ ಇರುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror