05.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ ಅಲ್ಲಲ್ಲಿ ತುಂತುರು ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂ ಜಿಲ್ಲೆಗಳ ರು ಹೆಚ್ಚಿನ ಭಾಗಗಳಲ್ಲಿ, ಬಳ್ಳಾರಿ, ರಾಯಚೂರು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೆಲವೆಡೆ ಮೋಡದ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿಯ ಬಳಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಹಿಂಗಾರು ಸೆಳೆಯುವಲ್ಲಿ ಸ್ವಲ್ಪ ಮಟ್ಟಿಗೆ ಸಫಲವಾದೀತು.
ಈಗಿನ ಪ್ರಕಾರ ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ಶ್ರೀಲಂಕಾ ಹಾಗೂ ನಿಕೋಬಾರ್ ಮಧ್ಯೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆ ಇದೆ.
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…