ವೆದರ್‌ ಮಿರರ್‌ | 05.11.2022 | ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ | ನ.7ರ ನಂತರ ವಾಯುಭಾರ ಕುಸಿತ ಸಾಧ್ಯತೆ |

November 5, 2022
11:30 AM

06.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ಚುರುಕುಗೊಂಡು ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.

ಇವತ್ತು ಸಹ ತಿರುಗುವಿಕೆ ಮುಂದುವರಿದಿದ್ದು, ಸ್ವಲ್ಪ ದಕ್ಷಿಣ ದಿಕ್ಕಿದೆ ಚಲಿಸಿರುವುದರಿಂದ ಕೇರಳದಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಸಾಧ್ಯತೆ ಇದೆ. ಕೊಡಗು, ಶೃಂಗೇರಿ, ಕುದುರೆಮುಖ ಭಾಗಗಳಲ್ಲಿ ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಅಲ್ಲಲ್ಲಿ, ಶಿವಮೊಗ್ಗ ಒಂದೆರಡು ಕಡೆ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಇವತ್ತಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. ಈಗಿನ ಪರಿಸ್ಥಿತಿಯಂತೆ ನವೆಂಬರ್ 12ರಿಂದ ಮತ್ತೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ
October 30, 2026
10:30 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-10-2026 | ಕರ್ನಾಟಕದಲ್ಲಿ ಸದ್ಯ ಒಣಹವೆ – ನವೆಂಬರ್ 2ರಿಂದ ಮತ್ತೆ ಮಳೆ ಸಾಧ್ಯತೆ
October 28, 2026
2:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror