06.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ಚುರುಕುಗೊಂಡು ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.
ಇವತ್ತು ಸಹ ತಿರುಗುವಿಕೆ ಮುಂದುವರಿದಿದ್ದು, ಸ್ವಲ್ಪ ದಕ್ಷಿಣ ದಿಕ್ಕಿದೆ ಚಲಿಸಿರುವುದರಿಂದ ಕೇರಳದಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಸಾಧ್ಯತೆ ಇದೆ. ಕೊಡಗು, ಶೃಂಗೇರಿ, ಕುದುರೆಮುಖ ಭಾಗಗಳಲ್ಲಿ ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು ಅಲ್ಲಲ್ಲಿ, ಶಿವಮೊಗ್ಗ ಒಂದೆರಡು ಕಡೆ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಇವತ್ತಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. ಈಗಿನ ಪರಿಸ್ಥಿತಿಯಂತೆ ನವೆಂಬರ್ 12ರಿಂದ ಮತ್ತೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…