Advertisement
ವೆದರ್ ಮಿರರ್

ವೆದರ್‌ ಮಿರರ್‌ | 05.11.2022 | ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ | ನ.7ರ ನಂತರ ವಾಯುಭಾರ ಕುಸಿತ ಸಾಧ್ಯತೆ |

Share

06.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ಚುರುಕುಗೊಂಡು ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.

ಇವತ್ತು ಸಹ ತಿರುಗುವಿಕೆ ಮುಂದುವರಿದಿದ್ದು, ಸ್ವಲ್ಪ ದಕ್ಷಿಣ ದಿಕ್ಕಿದೆ ಚಲಿಸಿರುವುದರಿಂದ ಕೇರಳದಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಸಾಧ್ಯತೆ ಇದೆ. ಕೊಡಗು, ಶೃಂಗೇರಿ, ಕುದುರೆಮುಖ ಭಾಗಗಳಲ್ಲಿ ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಅಲ್ಲಲ್ಲಿ, ಶಿವಮೊಗ್ಗ ಒಂದೆರಡು ಕಡೆ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಇವತ್ತಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. ಈಗಿನ ಪರಿಸ್ಥಿತಿಯಂತೆ ನವೆಂಬರ್ 12ರಿಂದ ಮತ್ತೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

3 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

8 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago