10.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ.
ಸಂಜೆ ಕಾಸರಗೋಡು ಹಾಗೂ ದಕ್ಷಿಣ ಕನ್ನಡ, ಪುತ್ತೂರು, ವಿಟ್ಲ ಸುತ್ತಮುತ್ತ ಅಲ್ಲಲ್ಲಿ ಸ್ವಲ್ಪ ಮೋಡದ ಸಾಧ್ಯತೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಈಗಿನ ಪ್ರಕಾರ ನವೆಂಬರ್ 12ರಂದು ತಮಿಳುನಾಡಿನ ವೇಲಂಕಣಿ, ನಾಗಪಟ್ಟಿನಮ್ ಕರಾವಳಿ ಮೂಲಕ ಭೂಮಿಗೆ ಪ್ರವೇಶಿಸಲಿದೆ.
ಪರಿಣಾಮವಾಗಿ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 12ರಿಂದ 5 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…