11.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಒಣ ಹವೆ ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 12ರಂದು ತಮಿಳುನಾಡಿನ ಕರಾವಳಿ ಮೂಲಕ ಭೂ ಪ್ರವೇಶಿಸಿ, 13 ರ ಸಂಜೆ ಅಥವಾ ರಾತ್ರಿ ಉತ್ತರ ಮಧ್ಯ ಕೇರಳ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಪ್ರವೇಶಿಸಲಿದೆ. ಮತ್ತೆ ಪ್ರಬಲಗೊಂಡು ಯೆಮನ್ ಕರಾವಳಿ ತನಕ ಸಾಗುವ ಲಕ್ಷಣಗಳಿವೆ.
ಇದರ ಪರಿಣಾಮದಿಂದ ನವೆಂಬರ್ 11ರ ಸಂಜೆಯಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ, 12ರಿಂದ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.ಈಗನ ಪ್ರಕಾರ ನವೆಂಬರ್ 15ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಮತ್ತೆ ಮಳೆ ಕಡಿಮೆಯಾಗಿ ಛಳಿ ಆರಂಭವಾಗುವ ಲಕ್ಷಣಗಳಿವೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…