ವೆದರ್‌ ಮಿರರ್‌ | 14.03.2022 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ

November 14, 2022
11:55 AM

15.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣ ಇರಲಿದ್ದು ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಬಳ್ಳಾಪುರ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಇನ್ನೆರಡು ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಉಷ್ಣಾಂಶ ಏರಿಕೆಯಾಗದ ಹೊರತು ಮಳೆಯ ಸಾಧ್ಯತೆ ಕಡಿಮೆ.
ನವೆಂಬರ್ 17ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror