16.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಾಮರಾಜನಗರ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ನವೆಂಬರ್ 16ರಿಂದ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಈ ಮೊದಲ ವಾಯುಭಾರ ಕುಸಿತ ಸಾಗಿದ ಹಾದಿಯಲ್ಲೇ ಸಾಗುವ ಲಕ್ಷಣಗಳಿವೆ. ಪರಿಣಾಮವಾಗಿ ನವೆಂಬರ್ 20ರ ನಂತರ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…