23.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹಗುರಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡವಿದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ವಾಯುಭಾರ ಕುಸಿತವು ನಾಳೆ ರಾತ್ರಿ ಅಥವಾ ನ.24 ರಂದು ತಮಿಳುನಾಡು ಕರಾವಳಿಯಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ.
ನ.23 ರಂದು ಕರ್ನಾಟಕ ಕರಾವಳಿಯಾದ್ಯಂತ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲ ಮೋಡ ಮತ್ತು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ನಾಡಿದ್ದು ನವೆಂಬರ್ 24, 25 ರಂದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.