ವೆದರ್‌ ಮಿರರ್‌ | 23 -11 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ |

Advertisement
Advertisement

24.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ತಮಿಳುನಾಡು ಕರಾವಳಿಯಲ್ಲಿರುವ ವಾಯುಭಾರ ಕುಸಿತ ಇವತ್ತು ರಾತ್ರಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿದ್ದರೂ ಇದರ ಪರಿಣಾಮ ನವೆಂಬರ್ 29 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 30ರಿಂದ ರಾಜ್ಯದಾದ್ಯಂತ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ವೆದರ್‌ ಮಿರರ್‌ | 23 -11 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ |"

Leave a comment

Your email address will not be published.


*