ವೆದರ್‌ ಮಿರರ್‌ | 24.11.2022 | ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣ, ಹಲವೆಡೆ ಮಳೆ ಸಾಧ್ಯತೆ |

November 24, 2022
12:17 PM

25.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು( ಮೂಡಿಗೆರೆ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ ಸುತ್ತಮುತ್ತ) ಶಿವಮೊಗ್ಗ, ಮೈಸೂರು ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಂಡಿದೆ. ರಾಜ್ಯದಲ್ಲಿ ಇದರ ಪ್ರಭಾವ ದಕ್ಷಿಣ ಒಡನಾಡಿನಲ್ಲಿ ಇನ್ನೆರಡು ದಿನ ಇದ್ದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನ. 28ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror