06.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಮಳೆಯ ಸಾಧ್ಯತೆ ಇರುವುದಿಲ್ಲ. ಇವತ್ತಿನಿಂದ ರಾಜ್ಯದಾದ್ಯಂತ ಕನಿಷ್ಠ ತಾಪಮಾನ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ನಿಕೋಬಾರ್ ತೀರದಲ್ಲಿ ಈಗಾಗಲೇ ವಾಯುಭಾರ ಕುಸಿತ ಪ್ರಾರಂಭವಾಗಿದ್ದು, ಡಿ.8 ರಂದು ಚಂಡಮಾರುತವಾಗಿ ಪಾಂಡಿಚೇರಿ ಕರಾವಳಿ ಭಾಗಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವೆದರ್ ಮಿರರ್ | 5.12.2022 | ರಾಜ್ಯದೆಲ್ಲೆಡೆ ಮೋಡದ ವಾತಾವರಣ ಸಾಧ್ಯತೆ |"