ವೆದರ್‌ ಮಿರರ್‌ | ಸುಳ್ಯ ತಾಲೂಕಿನ ಅಲ್ಲಲ್ಲಿ ತುಂತುರು ಮಳೆ

January 24, 2023
1:59 PM
25.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.  ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.   ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಉತ್ತಮ ಮಳೆಯ ನಿರೀಕ್ಷೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಉಳಿದ ಚಿಕ್ಕಮಗಳೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಜನವರಿ 25ರಂದು ಸಹ ಕರಾವಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, 26ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ.
ಅಲ್ಲಲ್ಲಿ ಮಳೆ
ಸುಳ್ಯ ತಾಲೂಕಿನ ಅಲ್ಲಲ್ಲಿ ಮಳೆಯಾಗಿದೆ. ಕೊಲ್ಲಮೊಗ್ರದ ಕೆಲವು ಕಡೆ ತುಂತುರು ಮಳೆ, ಕೊಡಗು ಸಂಪಾಜೆ ಬಳಿಯ ಚೆಂಬು, ಸುಳ್ಯದ ಪಂಜ, ಕರಿಕಳ ಸೇರಿದಂತೆ ವಿವಿದೆಡೆ ಅಲ್ಲಲ್ಲಿ ತುಂತುರು ಮಂಗಳವಾರ ಮಧ್ಯಾಹ್ನ ಮಳೆಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror