12.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನ ಮುನ್ಸೂಚನೆಯಂತೆ ಇವತ್ತಿನಿಂದ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಮೋಡಗಳು ಕಾಣಿಸಿಕೊಳ್ಳಲಿದ್ದು, ಮಾರ್ಚ್ 16ರ ತನಕ ಈ ಮೋಡಗಳ ಸರಣಿ ಮುಂದುವರಿಯಲಿದೆ.
ಮಾರ್ಚ್ 15 ಹಾಗೂ 16ರಂದು ರಾಜ್ಯದ ಕರಾವಳಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಕುದುರೆಮುಖ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. ಇದರ ಪ್ರಭಾವದಿಂದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಮಾರ್ಚ್ 17ರಿಂದ ಕರ್ನಾಟಕ ಹೊರತುಪಡಿಸಿ ದೇಶದ ಅನೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…