ವೆದರ್‌ ಮಿರರ್‌ | 20-03-2023 | ಕರಾವಳಿಯಾದ್ಯಂತ ಬಿಸಿಲಿನ ವಾತಾವರಣ | ಮಾ.25ರಂದು ಉತ್ತಮ ಮಳೆಯ ಮುನ್ಸೂಚನೆ |

March 20, 2023
1:01 PM

21.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯಾದ್ಯಂತ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣ ಇರಲಿದ್ದು ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಸಾಧ್ಯತೆ ಇದೆ. ಮಳೆಯ ಸಾಧ್ಯತೆ ಇರುವುದಿಲ್ಲ.

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಚಾಮರಾಜನಗರದ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 22ರಿಂದ ಕೊಡಗು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದ್ದು, 25ರಂದು ಉತ್ತಮ ಮಳೆಯ ಮುನ್ಸೂಚನೆ ಇದೆ. ಇದೇ ದಿನ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror