08.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ (ಸಕಲೇಶಪುರ ಭಾಗಗಳಲ್ಲಿ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
( ಗೋವಾ, ಬೆಳಗಾವಿ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ)
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಘಟ್ಟ ಪ್ರದೇಶಗಳಲ್ಲಿ ಉತ್ಪತ್ತಿಯಾದ ಮೋಡಗಳು ಪೂರ್ವಕ್ಕೆ ಚಲಿಸಿದ ಕಾರಣ ನಿನ್ನೆ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ರಾತ್ರಿ ಹಾಗೂ ಮುಂಜಾನೆ ಅರಬ್ಬಿ ಸಮುದ್ರ ಕಡೆಯಿಂದ ಬಂದ ಮೋಡಗಳಿಂದ ಕರಾವಳಿಯ ಕೆಲವು ಭಾಗಗಳಲ್ಲಿ ಅಬ್ಬರವಿಲ್ಲದೆ ಮಳೆಯಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel