08.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ (ಸಕಲೇಶಪುರ ಭಾಗಗಳಲ್ಲಿ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
( ಗೋವಾ, ಬೆಳಗಾವಿ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ)
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಘಟ್ಟ ಪ್ರದೇಶಗಳಲ್ಲಿ ಉತ್ಪತ್ತಿಯಾದ ಮೋಡಗಳು ಪೂರ್ವಕ್ಕೆ ಚಲಿಸಿದ ಕಾರಣ ನಿನ್ನೆ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ರಾತ್ರಿ ಹಾಗೂ ಮುಂಜಾನೆ ಅರಬ್ಬಿ ಸಮುದ್ರ ಕಡೆಯಿಂದ ಬಂದ ಮೋಡಗಳಿಂದ ಕರಾವಳಿಯ ಕೆಲವು ಭಾಗಗಳಲ್ಲಿ ಅಬ್ಬರವಿಲ್ಲದೆ ಮಳೆಯಾಗಿದೆ.
ಇವತ್ತು ಸ್ಥಳೀಯ ಮೋಡಗಳೂ ಸೇರಿಕೊಂಡರೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…