02.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ, ಉಡುಪಿ ಅಲ್ಲಲ್ಲಿ ಮೋಡ, ಉತ್ತರ ಕನ್ನಡ ಬಿಸಿಲು, ದಕ್ಷಿಣ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮೂಡಬಿದರೆ ಸುತ್ತಮುತ್ತ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕಳಸ, ಶೃಂಗೇರಿ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಗುಂಡ್ಲುಪೇಟೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.( ಸಂಜೆ ನಂತರ ಬೆಂಗಳೂರು ನಗರದಲ್ಲಿ ಸಂಚಾರವನ್ನು ಆದಷ್ಟು ತಪ್ಪಿಸುವುದೊಳಿತು. )
ಚಿತ್ರದುರ್ಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆಸ್ಟ್ರೇಲಿಯಾ ಪಶ್ಚಿಮ ಕರಾವಳಿಯಿಂದ ಈಗಾಗಲೇ ಮುಂಗಾರು ಮಾರುತಗಳು ಚಲನೆ ರೀತಿಯ ಗಾಳಿಯ ಚಲನೆಯು ಪ್ರಾರಂಭವಾಗಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಾಗಿದೆ.
ಈಗಾಗಲೇ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ನಾಳೆಯಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490