03.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕಳಸ, ಶೃಂಗೇರಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ 7ರಿಂದ ಮೂರು, ನಾಲ್ಕು ದಿನಗಳ ಕಾಲ ಕಾಸರಗೋಡು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬದಲಾಗಬಹುದು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…