ವೆದರ್‌ ಮಿರರ್‌ | 04.05.2023 | ಕರಾವಳಿಯಲ್ಲಿ ಬಿಸಿಲಿನ ವಾತಾವರಣ | ಮೇ 7ರ ನಂತರ ಚಂಡಮಾರುತ ಸಾಧ್ಯತೆ |

May 4, 2023
12:19 PM

05.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಭಾಗಗಳಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಬಹುದು.

ಚಾಮರಾಜನಗರ ಒಂದೆರಡು ಕಡೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ರಾಮನಗರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ವಾಯುಭಾರ ಕುಸಿತ : ಮೇ 7ರ ನಂತರ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಹಾಗೂ ಭೂಮಧ್ಯ ರೇಖೆಗಿಂತ ಕೆಳಗೆ ದಕ್ಷಿಣ ಸುಮಾತ್ರ ಕಡಲ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರ ಸುಮಾತ್ರ ಬಳಿಯ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಈಗಿನ ಪಥದಂತೆ ಚಂಡಮಾರುತವು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಮೇ 13ರಂದು ಬಂಗ್ಲಾದೇಶ ಹಾಗೂ ಮೆನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮೇ 10ರ ವರೆಗೆ ಅಂದರೆ ಚಂಡಮಾರುತವು ಸಂಪೂರ್ಣ ಉತ್ತರಕ್ಕೆ ಚಲಿಸುವವರೆಗೆ ರಾಜ್ಯದ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈ ಚಂಡಮಾರುತದ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಸಾಧ್ಯತೆ ಇದೆ. ಮುಂಗಾರು ನಿರೀಕ್ಷೆಗಿಂತ ಮೊದಲೇ ಬರುವ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror