05.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಭಾಗಗಳಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಬಹುದು.
ಚಾಮರಾಜನಗರ ಒಂದೆರಡು ಕಡೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ರಾಮನಗರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ವಾಯುಭಾರ ಕುಸಿತ : ಮೇ 7ರ ನಂತರ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಹಾಗೂ ಭೂಮಧ್ಯ ರೇಖೆಗಿಂತ ಕೆಳಗೆ ದಕ್ಷಿಣ ಸುಮಾತ್ರ ಕಡಲ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರ ಸುಮಾತ್ರ ಬಳಿಯ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.
ಈಗಿನ ಪಥದಂತೆ ಚಂಡಮಾರುತವು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಮೇ 13ರಂದು ಬಂಗ್ಲಾದೇಶ ಹಾಗೂ ಮೆನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮೇ 10ರ ವರೆಗೆ ಅಂದರೆ ಚಂಡಮಾರುತವು ಸಂಪೂರ್ಣ ಉತ್ತರಕ್ಕೆ ಚಲಿಸುವವರೆಗೆ ರಾಜ್ಯದ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಸಾಧ್ಯತೆ ಇದೆ. ಮುಂಗಾರು ನಿರೀಕ್ಷೆಗಿಂತ ಮೊದಲೇ ಬರುವ ಸಾಧ್ಯತೆಯೂ ಇದೆ.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…