ವೆದರ್‌ ಮಿರರ್‌ | 05-05 -2023 |‌ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಮೇ.8 ರಿಂದ ವಾಯುಭಾರ ಕುಸಿತದ ಲಕ್ಷಣ |

May 5, 2023
12:39 PM

06.05.2023 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ ಹಾಗೂ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಕಳಸ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಹಾಸನ, ತುಮಕೂರು, ಪಾವಗಡ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ದಿನ ಮುಂದೆ ಹೋಗುತ್ತಿದೆ. ಈಗಿನ ಲೆಕ್ಕಾಚಾರದ ಪ್ರಕಾರ ಮೇ 8ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು 9ರ ನಂತರ ಚಂಡಮಾರುತವಾಗುವ ಸಾಧ್ಯತೆ ಇದೆ. ಉತ್ತರಕ್ಕೆ ಚಲಿಸಿ ಮೇ 12ರಂದು ಬಂಗ್ಲಾದೇಶ ಹಾಗೂ ಮೆನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. ಚಂಡಮಾರುತವು ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror