06.05.2023 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ ಹಾಗೂ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಕಳಸ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಹಾಸನ, ತುಮಕೂರು, ಪಾವಗಡ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ದಿನ ಮುಂದೆ ಹೋಗುತ್ತಿದೆ. ಈಗಿನ ಲೆಕ್ಕಾಚಾರದ ಪ್ರಕಾರ ಮೇ 8ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು 9ರ ನಂತರ ಚಂಡಮಾರುತವಾಗುವ ಸಾಧ್ಯತೆ ಇದೆ. ಉತ್ತರಕ್ಕೆ ಚಲಿಸಿ ಮೇ 12ರಂದು ಬಂಗ್ಲಾದೇಶ ಹಾಗೂ ಮೆನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. ಚಂಡಮಾರುತವು ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…