ವೆದರ್‌ ಮಿರರ್‌ | 06-05-2023 | ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ |

May 6, 2023
11:08 AM
7.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಮುನ್ಸೂಚನೆಯಂತೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು ಹಾಸನ ಭಾರಿ ಮಳೆಯ ಸಾಧ್ಯತೆ ಇದೆ. ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಲಕ್ಷದ್ವೀಪ – ಉತ್ತರ ಸುಮಾತ್ರ ಹಾಗೂ ಭೂ ಮಧ್ಯ ರೇಖೆಗಿಂತ ಕೆಳಗೆ ದಕ್ಷಿಣ ಸುಮಾತ್ರ ತೀರದಲ್ಲಿ ಮೇ 9ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು. ಮೇ 10 ರಂದು ಚಂಡಮಾರುತವಾಗಿ ಪರಿವರ್ತನೆಗೊಂಡು ಲಕ್ಷದ್ವೀಪ ಪೂರ್ವ ಕರಾವಳಿಯ ಮೂಲಕ ಸಾಗಿ ಮೇ 12ರಂದು ಮಯನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. 
 ಭೂಮಧ್ಯ ರೇಖೆಗಿಂತ ಕೆಳಗಿನ ಚಂಡಮಾರುತದಿಂದ ಭಾರತಕ್ಕೆ ಯಾವುದೇ ರೀತಿಯ ಪರಿಣಾಮಗಳಿಲ್ಲ. ಆದರೆ ಮುಂಗಾರು ಮಾರುತಗಳಿಗೆ ಸ್ವಲ್ಪ ತೊಡಕಾಗಬಹುದು. ಕಾದು ನೋಡಬೇಕಾಗಿದೆ. ನಿರೀಕ್ಷೆಯಂತೆ ಮೇ 11ರ ತನಕ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲೆ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿಯಲ್ಲಿ ಮೋಡದ ವಾತಾವರಣದ ಇದ್ದು ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror