09.05.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ. ಉಳಿದ ದ. ಕ, ಉಡುಪಿ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಂಡಮಾರುತ: ಈಗಾಗಲೇ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಬಳಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು ಇನ್ನೆರಡು ದಿನಗಳಲ್ಲಿ ಪ್ರಭಲಗೊಂಡು ಚಂಡಮಾರುತವಾಗಿ ಉತ್ತರ ಮೇ 13ರಂದು ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮುಂಗಾರು ಹಿಂದೂ ಮಹಾಸಾಗರದಿಂದ ಅರಬ್ಬಿ ಸಮುದ್ರ ಪ್ರವೇಶಿಸುವ ಹಂತದಲ್ಲಿದೆ.