ವೆದರ್‌ ಮಿರರ್‌ | 09.05.2023 | ರಾಜ್ಯದ ಹಲವೆಡೆ ಮಳೆ ಸಾಧ್ಯತೆ |

May 9, 2023
12:26 PM

10.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಧಾರವಾಡ, ಹಾವೇರಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಇವತ್ತಿನಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಈಗಿನಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಚಂಡಮಾರುತ : ಈಗಾಗಲೇ ಅಂಡಮಾನ್ ಹಾಗೂ ಶ್ರೀಲಂಕಾ ಮಧ್ಯೆ ವಾಯುಭಾರ ಕುಸಿತ ಉಂಟಾಗಿದ್ದು ನಾಳೆ ರಾತ್ರಿ, ನಾಡಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ.
ಉತ್ತರಕ್ಕೆ ಸಾಗುವ ಚಂಡಮಾರುತವು ಮೇ 13ಕ್ಕೆ ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror