10.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಧಾರವಾಡ, ಹಾವೇರಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಇವತ್ತಿನಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಈಗಿನಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಚಂಡಮಾರುತ : ಈಗಾಗಲೇ ಅಂಡಮಾನ್ ಹಾಗೂ ಶ್ರೀಲಂಕಾ ಮಧ್ಯೆ ವಾಯುಭಾರ ಕುಸಿತ ಉಂಟಾಗಿದ್ದು ನಾಳೆ ರಾತ್ರಿ, ನಾಡಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ.
ಉತ್ತರಕ್ಕೆ ಸಾಗುವ ಚಂಡಮಾರುತವು ಮೇ 13ಕ್ಕೆ ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.
ಈಶಾನ್ಯ ಭಾರತದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮಾರ್ಗವಾಗಿ ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವ ಬಗ್ಗೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್ 27ರಂದು…
ನವೆಂಬರ್ 29ರಿಂದ ನಂದಿನಿ ಮೊಸರಿನ ದರ ಇಳಿಕೆಯಾಗಲಿದೆ. ಅರ್ಧ ಲೀಟರ್ ಮೊಸರಿಗೆ ₹1…
ವಿಯೆಟ್ನಾಂನ 27 ವರ್ಷದ ಬಾರ್ಟೆಂಡರ್ ನ್ಗುಯೆನ್ ತುಂಗ್ ಲಾಮ್ ಅವರು ಅಡಿಕೆ ಮತ್ತು…
ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಕರಾವಳಿ ವಿಭಾಗ ಮಟ್ಟದ…
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮುಂದಿನ ಮೂರು ತಿಂಗಳೊಳಗೆ ಕಿಮೋಥೆರಪಿ ಡೇ-ಕೇರ್ ಕೇಂದ್ರಗಳನ್ನು ಸ್ಥಾಪಿಸಲು…