ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

May 18, 2023
9:51 AM

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬುಧವಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ ಸಕ್ರಿಯವಾಗಿದೆ. ಇದರ ಪರಿಣಾಮದಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬಲವಾದ ಗಾಳಿ ಬೀಸಿದ್ದು, ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.

ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ತಿಳಿಯುವುದಾದರೆ, ದಕ್ಷಿಣ ಹರಿಯಾಣದಲ್ಲಿ ಲಘು ಧೂಳಿನ ಬಿರುಗಾಳಿ ಬೀಸಿದೆ. ಕರಾವಳಿ ಆಂಧ್ರಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ಆಗ್ನೇಯ ಉತ್ತರ ಪ್ರದೇಶ ಮತ್ತು ಹರಿಯಾಣದ ಕೆಲವೆಡೆ ಲಘು ಮಳೆಯಾಗಿದೆ. ಸಿಕ್ಕಿಂ, ಕರಾವಳಿ ಒಡಿಶಾ, ಆಂತರಿಕ ತಮಿಳುನಾಡಿನ ಕೆಲವು ಭಾಗಗಳು, ದಕ್ಷಿಣ ಕರ್ನಾಟಕ, ದಕ್ಷಿಣ ಮಧ್ಯಪ್ರದೇಶ ಮತ್ತು ಗುಜರಾತ್‌ ನಲ್ಲಿ ಕೂಡ ಹಗುರದಿಂದ ಸಾಧಾರಣ ಮಳೆಯಾಗಿದೆ.

ಕೇರಳ, ತಮಿಳುನಾಡು, ಈಶಾನ್ಯ ಬಿಹಾರ ಮತ್ತು ಗಿಲ್ಗಿಟ್-ಬಲಿಸ್ತಾನ್, ಮುಜಫರಾಬಾದ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದೆಹಲಿಯಲ್ಲಿ ಮುಂದಿನ 24 ಗಂಟೆಗಳ ಹವಾಮಾನ ಪರಿಸ್ಥಿತಿಯ ಬಗ್ಗೆ ತಿಳಿಯುವುದಾದರೆ, ಪಂಜಾಬ್, ಹರಿಯಾಣ, ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಲಘು ಮಳೆಯೊಂದಿಗೆ ಧೂಳಿನಿಂದ ಕೂಡಿದ ಬಿರುಗಾಳಿ ಬೀಸಬಹುದು.

ಇಂದು ಮತ್ತು ನಾಳೆ ಅಂದರೆ ಮೇ 19ರಂದು ದೆಹಲಿ-ಎನ್‌ಸಿಆರ್ ಜನರಿಗೆ ಮಳೆರಾಯನ ದರ್ಶನದಿಂದ ತಂಪಾದ ವಾತವಾರಣ ಸಿಗಬಹುದು. ಮೇ 20-21 ರಂದು ಬಲವಾದ ಬಿಸಿಲು ಇರುತ್ತದೆ. ಮೇ 22 ರಂದು ಹಗಲಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 23 ರಂದು ಕೂಡ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ
April 8, 2025
9:52 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ
April 8, 2025
9:48 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ | ಮುಂದಿನ 5 ದಿನಗಳಲ್ಲಿ ತಾಪಮಾನದಲ್ಲಿ ಏರಿಕೆ ಸಂಭವ
April 8, 2025
9:26 PM
by: The Rural Mirror ಸುದ್ದಿಜಾಲ
ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |
April 8, 2025
6:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group