ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬುಧವಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ ಸಕ್ರಿಯವಾಗಿದೆ. ಇದರ ಪರಿಣಾಮದಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬಲವಾದ ಗಾಳಿ ಬೀಸಿದ್ದು, ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.
ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ತಿಳಿಯುವುದಾದರೆ, ದಕ್ಷಿಣ ಹರಿಯಾಣದಲ್ಲಿ ಲಘು ಧೂಳಿನ ಬಿರುಗಾಳಿ ಬೀಸಿದೆ. ಕರಾವಳಿ ಆಂಧ್ರಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ಆಗ್ನೇಯ ಉತ್ತರ ಪ್ರದೇಶ ಮತ್ತು ಹರಿಯಾಣದ ಕೆಲವೆಡೆ ಲಘು ಮಳೆಯಾಗಿದೆ. ಸಿಕ್ಕಿಂ, ಕರಾವಳಿ ಒಡಿಶಾ, ಆಂತರಿಕ ತಮಿಳುನಾಡಿನ ಕೆಲವು ಭಾಗಗಳು, ದಕ್ಷಿಣ ಕರ್ನಾಟಕ, ದಕ್ಷಿಣ ಮಧ್ಯಪ್ರದೇಶ ಮತ್ತು ಗುಜರಾತ್ ನಲ್ಲಿ ಕೂಡ ಹಗುರದಿಂದ ಸಾಧಾರಣ ಮಳೆಯಾಗಿದೆ.
ಕೇರಳ, ತಮಿಳುನಾಡು, ಈಶಾನ್ಯ ಬಿಹಾರ ಮತ್ತು ಗಿಲ್ಗಿಟ್-ಬಲಿಸ್ತಾನ್, ಮುಜಫರಾಬಾದ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದೆಹಲಿಯಲ್ಲಿ ಮುಂದಿನ 24 ಗಂಟೆಗಳ ಹವಾಮಾನ ಪರಿಸ್ಥಿತಿಯ ಬಗ್ಗೆ ತಿಳಿಯುವುದಾದರೆ, ಪಂಜಾಬ್, ಹರಿಯಾಣ, ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಲಘು ಮಳೆಯೊಂದಿಗೆ ಧೂಳಿನಿಂದ ಕೂಡಿದ ಬಿರುಗಾಳಿ ಬೀಸಬಹುದು.
ಇಂದು ಮತ್ತು ನಾಳೆ ಅಂದರೆ ಮೇ 19ರಂದು ದೆಹಲಿ-ಎನ್‌ಸಿಆರ್ ಜನರಿಗೆ ಮಳೆರಾಯನ ದರ್ಶನದಿಂದ ತಂಪಾದ ವಾತವಾರಣ ಸಿಗಬಹುದು. ಮೇ 20-21 ರಂದು ಬಲವಾದ ಬಿಸಿಲು ಇರುತ್ತದೆ. ಮೇ 22 ರಂದು ಹಗಲಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 23 ರಂದು ಕೂಡ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…