ವೆದರ್‌ ಮಿರರ್‌ | 21.05.2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ ಸಾಧ್ಯತೆ

May 21, 2023
1:50 PM

22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ.

ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಮೈಸೂರು ಅಲ್ಲಲ್ಲಿ, ಬೆಂಗಳೂರು ಹಾಗೂ ತುಮಕೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪಾತ್ರ ಮಹತ್ವದ್ದು.

ಮಲೆನಾಡು, ದಕ್ಷಿಣ ಒಳನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯು ಮುಂದುವರಿಯಲಿದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಸ್ಥಿತಿ : ಐಎಮ್‌ಡಿ ವರದಿಯಂತೆ ಅಂಡಮಾನ್ ಗೆ ಈಗಾಗಲೇ ಮುಂಗಾರು ತಲುಪಿದ್ದು ಜೂ. 4 ರ ಆಸುಪಾಸು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ತಿಳಿಸಿದೆ.

ಆದರೆ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಇನ್ನೂ ಚುರುಕಾಗಬೇಕಾಗಿದೆ.
ಹಿಂದೂಮಹಾಸಾಗರದ ಈಗಿನ ಚಂಡಮಾರುತವು ಮುಂಗಾರು ಮುನ್ನಡೆಗೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ.
ಅಂತೂ ಜೂನ್ ತಿಂಗಳಲ್ಲಿ ಆರಂಭಿಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror