02.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸೋಮವಾರಪೇಟೆ, ಹಾಸನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ತಾಪಮಾನ ಏರಿಕೆಯಿಂದ ಕೆಲವು ಅನಿರೀಕ್ಷಿತ ಮಳೆಗಳು ಮುನ್ಸೂಚನೆಗೆ ಸಿಗುತ್ತಿಲ್ಲ.
ಮುಂಗಾರು ಸ್ಥಿತಿ : ಅರಬ್ಬಿ ಸಮುದ್ರದಲ್ಲಿ ಈಗ ಮುಂಗಾರಿಗೆ ಪೂರಕವಾದ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಅಂಡಮಾನ್ ನಿಕೋಬಾರ್ ಗೆ ಮಾತ್ರ ಸೀಮಿತವಾಗಿದೆ. ಕೆಂಪು ಗೆರೆಯವರೆಗೆ ಮುಂಗಾರು ಮುಂದುವರಿದಿದೆ.ಜೂನ್ 5 ರ ಅಂದಾಜು ಅರಬೀಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದ ನಂತರ ಕೇರಳ ಹಾಗೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…