Advertisement
ಸುದ್ದಿಗಳು

ವೆದರ್‌ ಮಿರರ್‌ | 06.06.2023 | ರಾಜ್ಯದ ಹಲವೆಡೆ ತುಂತುರು ಮಳೆ ಸಾಧ್ಯತೆ

Share

07.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಹಾಸನ, ಮಂಡ್ಯ, ತುಮಕೂರು, ಚಿಕ್ಕನಾಯಕನಹಳ್ಳಿ,ತಿಪಟೂರು, ತುರುವೆಕೆರೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೆ ವಾಯುಭಾರ ಕುಸಿತದ ಪರಿಣಾಮದಿಂದ ಈ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಗಾಳಿಯ ಪಾತ್ರ ಮಹತ್ವದ್ದು. ಮೋಡವಿದ್ದರೂ ಗಾಳಿಯ ಒತ್ತಡ ಕಡಿಮೆ ಇದ್ದರೆ ಮಳೆಯ ಸಾಧ್ಯತೆ ಕಡಿಮೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ತಾಪಮಾನ ಏರಿಕೆಯಿಂದ ಮುನ್ಸೂಚನೆಗೆ ಸಿಗದೆ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ.

ಮುಂಗಾರು ಮತ್ತು ವಾಯುಭಾರ ಕುಸಿತ :
ಈಗಾಗಲೇ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಉಂಟಾಗಿದ್ದು, ನಾಳೆ ಅಥವಾ ನಾಡಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ. ಉತ್ತರಕ್ಕೆ ಚಲಿಸಿ ಪಾಕಿಸ್ತಾನ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಮುಂಗಾರು ಸ್ಥಿತಿ ನಿನ್ನೆಯ ತನಕ ಮುಂದುವರಿದಲ್ಲಿಂದ ವಾಯುಭಾರ ಕುಸಿತ ಪರಿಣಾಮವಾಗಿ ಹಿಂದೆ ಸರಿದಿದ್ದು, ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ತನಕ ಇದೇ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

3 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

6 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago