21.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮಳೆ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು – ಚಿತ್ರದುರ್ಗ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಇನ್ನೆರಡು ಮೂರು ದಿನಗಳಲ್ಲಿ ಕರಾವಳಿಗೆ ಮಾತ್ರ ಸೀಮಿತಗೊಳ್ಳುವ ಸಾಧ್ಯತೆ ಇದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…