#WeatherMirror | ವೆದರ್‌ ಮಿರರ್‌ | 21.06.2023 | ರಾಜ್ಯದ ಹಲವೆಡೆ ಮಳೆ ಸಾಧ್ಯತೆ

June 21, 2023
1:08 PM

22.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

ತುಮಕೂರು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಮೋಡವಿದ್ದರೂ ಗಾಳಿಯ ಒತ್ತಡದ ಕೊರತೆಯಿಂದ ಮಳೆಯಾಗುತ್ತಿಲ್ಲ.

ಈಗಿನ ಮುನ್ಸೂಚನೆಯಂತೆ ಜೂ. 25ರಿಂದ ಮಧ್ಯ ಭಾರತದ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪರಿಣಾಮದಿಂದ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ನದಿಗಳು ತುಂಬುವ ಭರವಸೆ ಇದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಜೂ. 24ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆಮೇಲೆ ಮಳೆ ಕಡಿಮೆಯಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror