22.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ತುಮಕೂರು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಮೋಡವಿದ್ದರೂ ಗಾಳಿಯ ಒತ್ತಡದ ಕೊರತೆಯಿಂದ ಮಳೆಯಾಗುತ್ತಿಲ್ಲ.
ಈಗಿನ ಮುನ್ಸೂಚನೆಯಂತೆ ಜೂ. 25ರಿಂದ ಮಧ್ಯ ಭಾರತದ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪರಿಣಾಮದಿಂದ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ನದಿಗಳು ತುಂಬುವ ಭರವಸೆ ಇದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಜೂ. 24ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆಮೇಲೆ ಮಳೆ ಕಡಿಮೆಯಾಗಬಹುದು.ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…