04.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಈಗ ಚುರುಕುಗೊಂಡರೂ ಜುಲೈ 9 ಅಥವಾ 10ರ ನಂತರ ಪುನಃ ದುರ್ಬಲಗೊಳ್ಳವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಹೆಚ್ಚು ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿಲ್ಲ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ತುಮಕೂರು, ವಿಜಯನಗರ, ಹಾಸನ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯಿಂದ ಉತ್ತರ ಒಳನಾಡಿನ ಕೆಲವೆಡೆ ಮಳೆ ಆರಂಭವಾಗಿದೆ. ಸದ್ಯ ನಿಧಾನವಾಗಿ ಮಳೆ ಚುರುಕು ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ಮುಂದಿನ 4-5 ದಿನ ರಾಜ್ಯದ ಕೆಲ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕೈದು ದಿನ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಪರಿಸರದಲ್ಲಿ ಮಳೆರಾಯ ಅಬ್ಬರಿಸುವ ಸಾಧ್ಯತೆಗಳಿವೆ. ಭಾನುವಾರ ಮಧ್ಯಾಹ್ನದಿಂದಲೇ ಬಹುತೇಕ ಕಡೆ ಮಳೆ ಆರಂಭಗೊಂಡಿದೆ.