#WeatherMirror | 03-07-2023 | ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ | ನಿಧಾನಕ್ಕೆ ರಾಜ್ಯಕ್ಕೆ ವಿಸ್ತರಣೆ |ಜು.10 ರ ನಂತರ ಮತ್ತೆ ಮುಂಗಾರು ದುರ್ಬಲಗೊಳ್ಳವ ಸಾಧ್ಯತೆ |

July 3, 2023
12:47 PM

04.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ಈಗ ಚುರುಕುಗೊಂಡರೂ ಜುಲೈ 9 ಅಥವಾ 10ರ ನಂತರ ಪುನಃ ದುರ್ಬಲಗೊಳ್ಳವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಹೆಚ್ಚು ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿಲ್ಲ.

ಹವಾಮಾನ ಇಲಾಖೆ ವರದಿ :
ಜೂನ್ ನಾಲ್ಕಕ್ಕೆ ಪ್ರವೇಶಿಸಬೇಕಾದ ಮುಂಗಾರು ರಾಜ್ಯಕ್ಕೆ ಜೂನ್ 8ಕ್ಕೆ ಪ್ರವೇಶ ನೀಡಿತ್ತು. ಆದರೆ ಕೇವಲ ಕರಾವಳಿ, ಮಲೆನಾಡು ಕಡೆ ತಕ್ಕ ಮಟ್ಟಿನ ಮಳೆ ಆಗಿದ್ದು ಬಿಟ್ಟರೆ, ಉತ್ತರ ಕರ್ನಾಟಕ, ಮೈಸೂರು ಕರ್ನಾಕಟಕದ ಕಡೆ ವರುಣ ಪತ್ತೆಯಾಗಲೇ ಇಲ್ಲ. ಇದೀಗ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ತುಮಕೂರು, ವಿಜಯನಗರ, ಹಾಸನ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ನಿನ್ನೆಯಿಂದ ಉತ್ತರ ಒಳನಾಡಿನ ಕೆಲವೆಡೆ ಮಳೆ ಆರಂಭವಾಗಿದೆ. ಸದ್ಯ ನಿಧಾನವಾಗಿ ಮಳೆ ಚುರುಕು ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ಮುಂದಿನ 4-5 ದಿನ ರಾಜ್ಯದ ಕೆಲ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕೈದು ದಿನ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಪರಿಸರದಲ್ಲಿ ಮಳೆರಾಯ ಅಬ್ಬರಿಸುವ ಸಾಧ್ಯತೆಗಳಿವೆ. ಭಾನುವಾರ ಮಧ್ಯಾಹ್ನದಿಂದಲೇ ಬಹುತೇಕ ಕಡೆ ಮಳೆ ಆರಂಭಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror