07.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆ ಇವತ್ತು ಸಹ ಮುಂದುವರಿಯಲಿದೆ. ಆದರೆ ತೀವ್ರತೆ ಸ್ವಲ್ಪ ಕಡಿಮೆ ಇರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಹಾವೇರಿ, ಗದಗ, ಬಾಗಲಕೋಟೆ? ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಮುಂಗಾರು ಜುಲೈ 7 ರಿಂದ ಒಳನಾಡು ಭಾಗಗಳಲ್ಲಿ ಕ್ಷೀಣಿಸುವ ಲಕ್ಷಣಗಳಿದ್ದು, ಜುಲೈ 10ರ ನಂತರ ದಕ್ಷಿಣ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…