Advertisement
ವೆದರ್ ಮಿರರ್

ವೆದರ್‌ ಮಿರರ್‌ | 16.07.2023 | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ | ಜು.19ರಿಂದ ಮಳೆ ಜೋರಾಗುವ ಸಾಧ್ಯತೆ

Share

17.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡದ ಜೊತೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು ಭಾಗಗಳಾದ ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಕರಾವಳಿ ಭಾಗಗಳಲ್ಲಿ ಜು.17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜು. 19ರಿಂದ ಮಳೆ ಜೋರಾಗುವ ಮುನ್ಸೂಚನೆ ಇದೆ.
ಈ ಸಮಯದಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಸಹ ಆಶಾದಾಯಕ ಬೆಳವಣಿಗೆಯಾಗಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

21 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago