10.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ, ಹಾವೇರಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಷ್ಣಾಂಶ ಏರಿಕೆಯಿಂದಾಗಿ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಗುಡುಗು ಮಳೆಯ ಸಾಧ್ಯತೆ ಇದೆ. ಮುಂಗಾರು ಅತಿ ದುರ್ಬಲವಾಗಿರುವುದರಿಂದ ಆ.12ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆ.13ರಿಂದ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…