Advertisement
ವೆದರ್ ಮಿರರ್

#WeatherMirror | 09-08-2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣ | ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣ |

Share

10.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ, ಹಾವೇರಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಷ್ಣಾಂಶ ಏರಿಕೆಯಿಂದಾಗಿ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಗುಡುಗು ಮಳೆಯ ಸಾಧ್ಯತೆ ಇದೆ. ಮುಂಗಾರು ಅತಿ ದುರ್ಬಲವಾಗಿರುವುದರಿಂದ ಆ.12ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆ.13ರಿಂದ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

6 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago