#WeatherMirror | 13-08-2023 | ಮುಂದುವರಿದ ಬಿಸಿಲಿನ ವಾತಾವರಣ | ಮುಂಗಾರು ದುರ್ಬಲತೆ ಮುಂದುವರಿಕೆ | ಆ.18 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ನಿರೀಕ್ಷೆ |

August 13, 2023
12:05 PM
ಮುಂಗಾರು ದುರ್ಬಲತೆ ಮುಂದುವರಿದಿದೆ. ಆ.18ರಿಂದ ಉತ್ತರ ಕನ್ನಡ ಕರಾವಳಿ ಹಾಗೂ ಆ.19 ರಿಂದ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುವ ಯಾವುದೇ ಲಕ್ಷಣಗಳಿಲ್ಲ.

14.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ – ಕಾಸರಗೋಡು ಗಡಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಹಾಸನ ಜಿಲ್ಲೆಯ ಹಾಸನ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ.18ರಿಂದ ಉತ್ತರ ಕನ್ನಡ ಕರಾವಳಿ ಹಾಗೂ ಆ.19 ರಿಂದ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುವ ಯಾವುದೇ ಲಕ್ಷಣಗಳಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror