30.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಹಾಸನ, ಚಾಮರಾಜನಗರ( ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಹಾಗೂ ಗುಂಡ್ಲುಪೇಟೆ), ಕೋಲಾರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ವಾತಾವರಣದ ಅಧಿಕ ತಾಪಮಾನದಿಂದಾಗಿ ಆ.30ರಿಂದ ಮಲೆನಾಡು ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನ ಈ ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ವಿಶೇಷವಾಗಿ ಒಳನಾಡು ಭಾಗಗಳಿಗೆ ಹೋಲಿಸಿದರೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಮುನ್ಸೂಚನೆ ಇದೆ.