Advertisement
ವೆದರ್ ಮಿರರ್

#WeatherMirror | 30-08-2023 | ಕರಾವಳಿ ತೀರ ಭಾಗದ ಅಲ್ಲಲ್ಲಿ ಮಳೆ ಸಾಧ್ಯತೆ | ಮುಂಗಾರು ದುರ್ಬಲತೆ ಮುಂದುವರಿಕೆ | ಸೆ.6 ರಿಂದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗುವ ಸಾಧ್ಯತೆ |

Share

31.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿ ತೀರ ಭಾಗಗಳ ಒಂದೆರಡು ಕಡೆ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳನ್ನು ಹೊರತು ಪಡಿಸಿ ಉಳಿದ ಕಡೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.

ಹಾಸನ ಹಾಗೂ ಚಿಕ್ಕಬಳ್ಳಾಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಪಾವಗಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಇವತ್ತಿನಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಸೆಪ್ಟೆಂಬರ್ 6ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿಯಲ್ಲಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

12 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

12 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

12 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

13 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago