01.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಾತಾವರಣದ ಅಧಿಕ ತಾಪಮಾನದ ಕಾರಣದಿಂದ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆ. 4 ರಿಂದ ಕಾಸರಗೋಡು ಹಾಗೂ 6ರ ನಂತರ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ. ಆದರೂ ಮುನ್ಸೂಚನಾ ನಕ್ಷೆಯಲ್ಲಿ ತೋರಿಸಿದಂತೆ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ.
ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ…
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ…
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ…
ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು…
ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು…
ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು…