09.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಒಳನಾಡಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗಿದ್ದು ಸೆ.12ರ ನಂತರ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…