17.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಉತ್ತಮ ಮಳೆಯ ಸಾಧ್ಯತೆ ಇದೆ.
ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉತ್ತರ ಮಹಾರಾಷ್ಟ್ರ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 17ರಂದು ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ರಾಜ್ಯದ ಕರಾವಳಿ ಭಾಗಗಳಲ್ಲಿ ಸೆ. 17ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಸೆ. 24ರ ತನಕ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 20ರಿಂದ 4 ದಿನಗಳ ಕಾಲ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…