04.0.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ – ಗೋವಾ – ಬೆಳಗಾವಿ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಚಿಕ್ಕಮಗಳೂರು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ, ಧಾರವಾಡ, ಗದಗ, ಬೆಳಗಾವಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ.
ಇನ್ನೆರಡು ದಿನಗಳಲ್ಲಿ ಮುಂಗಾರು ಸಂಪೂರ್ಣ ಹಿಂದೆ ಸರಿಯಲಿದ್ದು, ಅ. 8ರ ನಂತರ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಹಿಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚನೆ ಇದೆ.ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…