15.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅ.16ರಂದು ಮಧ್ಯ ಕೇರಳಕ್ಕೆ ನೇರವಾಗಿ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದ ದಕ್ಷಿಣ ಒಳನಾಡು ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಸಾಧ್ಯತೆ ಇದ್ದರೂ 2 ದಿನಗಳಲ್ಲಿ ಮತ್ತೆ ದುರ್ಬಲಗೊಳ್ಳಲಿದೆ.